ಗೋಕಾಕ : ಬೆಳಗಾವಿ ಜಿಲ್ಲೆಯ ಗೋಕಾಕ (Gokak) ನಗರದ ಸಮೀಪ ಲಗ್ಜರಿ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಮಗು ಸೇರಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ರಿದ್ದಿ ಸಿದ್ದಿ ಕಾರ್ಖಾನೆ (factory) ಸಮೀಪ ಸಾಯಂಕಾಲ 6 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.
ಗಾಯಗೊಂಡವರ ಬಗ್ಗೆ ಇನ್ನೂ ಯಾವುದೆ ಮಾಹಿತಿ ತಿಳಿದು ಬಂದಿಲ್ಲ. ಸದ್ಯ ಗಾಯಾಳುಗಳನ್ನು ಗೋಕಾಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಣ್ಣೂರ ಕಡೆಯಿಂದ ಗೋಕಾಕ ನಗರಕ್ಕೆ ಲಗ್ಜರಿ ಹೋಗುತ್ತಿದ್ದ ವೇಳೆ ಸ್ಕೂಟಿಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಮೇಲ್ನೋಟಕ್ಕೆ ಲಗ್ಜರಿ ವಾಹನದ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.
ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.