ಇಸ್ರೋ ನೇಮಕಾತಿ: ಪದವೀಧರರು ಅರ್ಜಿ ಸಲ್ಲಿಸಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕೇಂದ್ರೀಕೃತ ನೇಮಕಾತಿ ಮಂಡಳಿ (ICRB) ಅಡಿಯಲ್ಲಿ ಅಸಿಸ್ಟೆಂಟ್, ಜೂನಿಯರ್ ಪರ್ಸನಲ್ ಅಸಿಸ್ಟೆಂಟ್, ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕೋರಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ISRO ಅಧಿಕೃತ ವೆಬ್‌ಸೈಟ್ isro.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಅಸಿಸ್ಟೆಂಟ್- 339 ಹುದ್ದೆಗಳು
ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ – 153 ಹುದ್ದೆಗಳು
ಅಪ್ಪರ್ ಡಿವಿಷನ್ ಕ್ಲರ್ಕ್ – 16 ಹುದ್ದೆಗಳು
ಸ್ಟೆನೋಗ್ರಾಫರ್ – 14 ಹುದ್ದೆಗಳು
ಸಹಾಯಕ (ಡಿಇಪಿಟಿ) – 3 ಹುದ್ದೆಗಳು
ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ (ಡಿಇಪಿಟಿ)- 1 ಹುದ್ದೆ
ಒಟ್ಟು ಹುದ್ದೆಗಳ ಸಂಖ್ಯೆ- 526

ಅರ್ಹತಾ ಮಾನದಂಡಗಳು:

ಜೂನಿಯರ್ ಪರ್ಸನಲ್ ಅಸಿಸ್ಟೆಂಟ್/ಸ್ಟೆನೋಗ್ರಾಫರ್ – ಅಭ್ಯರ್ಥಿಗಳು ಕನಿಷ್ಠ 60% ಅಂಕಗಳೊಂದಿಗೆ ಪದವಿಯನ್ನು ಹೊಂದಿರಬೇಕು. ಅಲ್ಲದೆ ಸ್ಟೆನೋ-ಟೈಪಿಸ್ಟ್/ಸ್ಟೆನೋಗ್ರಾಫರ್ ಆಗಿ ಒಂದು ವರ್ಷದ ಅನುಭವ ಇರಬೇಕು.
ಸಹಾಯಕ/ಯುಡಿಸಿ/ಇತರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಕನಿಷ್ಠ 60% ಅಂಕಗಳೊಂದಿಗೆ ಪದವಿ ಪಡೆದಿರಬೇಕು.

ಗರಿಷ್ಠ ವಯೋಮಿತಿ:

Gen – 28 ವರ್ಷಗಳು
OBC – 31 ವರ್ಷಗಳು
SC/ST – 33 ವರ್ಷಗಳು
ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ. 100/- ರೂ ಪಾವತಿಸಬೇಕಾಗುತ್ತದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆರಂಭಿಕ ಮಾಸಿಕ ವೇತನವಾಗಿ ರೂ. 25,500/- ರೂ. ಸಿಗಲಿದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 9, 2023

error: Content is protected !!