ಅಕ್ರಮವಾಗಿ ಗುದದ್ವಾರದಲ್ಲಿ ಬಚ್ಚಿಟ್ಟು ಚಿನ್ನ ಸಾಗಣೆ: ಪ್ರಯಾಣಿಕ ಅರೆಸ್ಟ್

ಬೆಂಗಳೂರು : ಗುದದ್ವಾರದಲ್ಲಿ ಬಚ್ಚಿಟ್ಟುಕೊಂಡು ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಚಾಲಾಕಿ ಪ್ರಯಾಣಿಕನನ್ನು ಬೆಂಗಳೂರಿನ ಕಸ್ಟಮ್ಸ್​​ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 28,73,932 ಲಕ್ಷ ಮೌಲ್ಯದ 532 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಮಾಲ್ಡೀವ್ಸ್ ನಿಂದ ಮಾಲ್ಡಿವ್ಸ್ ಜಿ8-44 ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ಥಾಣಕ್ಕೆ ಪ್ರಯಾಣಿಕನೋರ್ವ ಬಂದಿಳಿದಿದ್ದ.

ಈ ವೇಳೆ ಪ್ರಯಾಣಿಕನ ವರ್ತನೆಯನ್ನು ಕಂಡು ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ ಪ್ರಯಾಣಿಕ ಗುದದ್ವಾರದಲ್ಲಿ ಚಿನ್ನವನ್ನು ಮಾತ್ರೆಗಳಂತೆ ಪರಿವರ್ತಿಸಿ ಬಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ. ಸದ್ಯ ಚಿನ್ನ ಸಮೇತ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು ವಿಚಾರಣೆ ಮುಂದುವರೆಸಿದ್ದಾರೆ.

error: Content is protected !!