ರಾಕಿಂಗ್ ಸ್ಟಾರ್ ಜೊತೆ ಕಾಣಿಸಿಕೊಂಡ ಪಾಂಡ್ಯ ಬ್ರದರ್ಸ್

ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ನಟ ರಾಕಿಂಗ್ ಸ್ಟಾರ್ ಯಶ್ ಜೊತೆ ಕಾಣಿಸಿಕೊಂಡಿದ್ದಾರೆ.

ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಜೊತೆ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಇಬ್ಬರು ಫೋಟೋ ತೆಗೆಸಿಕೊಂಡಿದ್ದು, ಈ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಕೆಜಿಎಫ್ 3 ಎಂದು ಬರೆದುಕೊಂಡು ಹಾರ್ದಿಕ್ ಪೋಸ್ಟ್ ಮಾಡಿದ್ದಾರೆ.

ಇತ್ತ ಹಾರ್ದಿಕ್ ಪೋಸ್ಟ್ ಮಾಡುತ್ತಿದ್ದಂತೆ ಕೆಜಿಎಫ್ 3 ಟ್ರೆಂಡಿಂಗ್ ಆಗಿದೆ. ನೆಟ್ಟಿಗರು ಕಾಮೆಂಟ್‌ಗಳ ಸುರಿಮಳೆಗೈದಿದ್ದಾರೆ.

ಹಾರ್ದಿಕ್ ಪಾಂಡ್ಯ ಸದ್ಯ ಶ್ರೀಲಂಕಾ ವಿರುದ್ಧದ ಸರಣಿಯ ಸಿದ್ಧತೆಯಲ್ಲಿದ್ದು, ಟಿ20 ತಂಡದ ನಾಯಕನಾಗಿ ಆಯ್ಕೆಗೊಂಡಿದ್ದಾರೆ. ಏಕದಿನ ತಂಡದ ಉಪನಾಯಕನ ಸ್ಥಾನ ಕೂಡ ಸಿಕ್ಕಿದೆ. ತವರಿನಲ್ಲಿ ಭಾರತ ಪ್ರವಾಸಿ ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಮತ್ತು 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಜ.3 ರಿಂದ ಟಿ20 ಸರಣಿ ಆರಂಭಗೊಳ್ಳಲಿದೆ.

error: Content is protected !!