ದರ್ಶನ್‌ ಮೇಲೆ ಚಪ್ಪಲಿ ಎಸೆತ ಪ್ರಕರಣ: ಮೂವರ ಬಂಧನ

ಡಿಸೆಂಬರ್‌ 18ರಂದು ಕ್ರಾಂತಿ ಚಲನಚಿತ್ರ ಪ್ರಚಾರ ಸಮಾರಂಭದಲ್ಲಿ ಕರ್ನಾಟಕದ ಖ್ಯಾತ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತುಗುದೀಪ್‌ ಅವರ ಮೇಲೆ ಚಪ್ಪಲಿ ಎಸೆದಿದ್ದ ಪ್ರಕರಣ ಸಂಬಂಧ ಮೂವರನ್ನು ವಿಜಯನಗರ ಜಿಲ್ಲೆ ಹೊಸಪೇಟೆ ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳನ್ನು ಪತ್ತೆ ಹಚ್ಚುವ ಕುರಿತು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಈ ತಂಡದವರು ಭಾನುವಾರ ಪ್ರಕರಣ ಸಂಬಂಧ ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್‌ ಪ್ರಕಟಣೆ ತಿಳಿಸಿದೆ.

ಈ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವ ಕುರಿತು ವಿಜಯನಗರ ಜಿಲ್ಲಾ ಎಸ್‌ಪಿ ಮಾರ್ಗದರ್ಶನದಲ್ಲಿ ಹೊಸಪೇಟೆ ಡಿವೈಎಸ್‌ಪಿ ನೇತೃತ್ವದಲ್ಲಿ ಇತರ ಪೊಲೀಸ್‌ ಸಿಬ್ಬಂದಿ ಇನ್ನೂಳಿದ ಆರೋಪಿಗಳ ಪತ್ತೆ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

error: Content is protected !!