ಪಂಕ್ಚರ್ ಆಗಿದ್ದನ್ನು ರಿಪೇರಿ ಮಾಡುತ್ತಿದ್ದವನ ದೇಹವೇ ಛಿದ್ರಛಿದ್ರ; ಲಾರಿಗೆ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ

ಹಾಳಾಗಿ ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಬಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ, ದುರಸ್ತಿಗೆ ತೊಡಗಿದ್ದವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಮಾತ್ರವಲ್ಲ, ಆತನ ದೇಹ ಛಿದ್ರಗೊಂಡಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದುಂಡಕುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಘಟನೆ ನಡೆದಿದೆ. ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಸರಕು ತುಂಬಿಕೊಂಡು ಬರುತ್ತಿದ್ದ ಇನ್ನೊಂದು ಲಾರಿ ಡಿಕ್ಕಿ ಹೊಡೆದಿದೆ.

ಈ ಸಂದರ್ಭದಲ್ಲಿ ಪಂಕ್ಚರ್ ಆಗಿದ್ದ ಚಕ್ರದ ದುರಸ್ತಿಯಲ್ಲಿ ತೊಡಗಿದ್ದವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಆತನ ದೇಹ ಛಿದ್ರಗೊಂಡಿತ್ತು. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿದ್ದು, ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!