ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ – ಪತಿ ವಿರುದ್ಧ ಪತ್ನಿ ದೂರು

ಅಪ್ರಾಪ್ತ ಮಗಳ ಮೇಲೆ 30 ವರ್ಷದ ತಂದೆಯೇ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ.ಆರೋಪಿ ಬಿಹಾರದ ಮೂಲದವನಾಗಿದ್ದು, ಪ್ರಸ್ತುತ ತನ್ನ ಪತ್ನಿ ಮತ್ತು ಒಂಬತ್ತು ವರ್ಷದ ಮಗಳ ಜೊತೆಗೆ ನಾಗ್ಪುರ ನಗರದಿಂದ 40 ಕಿಮೀ ದೂರದಲ್ಲಿರುವ ಕಲ್ಮೇಶ್ವರ ಪಟ್ಟಣದ ಎಂಐಡಿಸಿ ಪ್ರದೇಶದಲ್ಲಿ ವಾಸಿಸುತ್ತಿದ್ದನು. ಆರೋಪಿಯು ಕಳೆದ ಎರಡು ತಿಂಗಳಿನಿಂದ ಬಾಲಕಿಗೆ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಮತ್ತು ಮಂಗಳವಾರ ಮಧ್ಯರಾತ್ರಿ ಈ ಕೃತ್ಯವನ್ನು ಮತ್ತೆ ಎಸಗಲು ಪ್ರಯತ್ನಿಸಿದಾಗ, ಆರೋಪಿ ವಿರುದ್ಧ ಪತ್ನಿಯೇ ಕಲ್ಮೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಅತ್ಯಾಚಾರ ಮತ್ತು ಇತರ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

error: Content is protected !!