ತುಮಕೂರು: ರೈತರ ಪಂಪ್ ಸೆಟ್ ಗಳಿಗೆ ಸರ್ಕಾರದಿಂದ ಮೀಟರ್ ಅಳವಡಿಸಲಾಗುತ್ತದೆ ಎನ್ನಲಾಗಿತ್ತು. ಆದ್ರೇ ಸರ್ಕಾರ ಅಂತಹ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ರೈತರ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಕೆಯಿಲ್ಲ ಎಂಬುದಾಗಿ ಇಂಧನ ಸಚಿವ ಸುನೀಲ್ ಕುಮಾರ್ ( Minister Sunil Kumar ) ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಮೀಟರ್ ಅಳವಡಿಸಲಾಗುತ್ತಿದೆ ಎಂಬುದೆಲ್ಲಾ ಸುಳ್ಳು. ಇದು ಅಪಪ್ರಚಾರ ಕೂಡ. ಅಂತಹ ಯಾವುದೇ ಕ್ರಮವನ್ನು ಸರ್ಕಾರ ಕೈಗೊಳ್ಳುತ್ತಿಲ್ಲ ಎಂಬುದಾಗಿ ಹೇಳಿದರು.
ರೈತರಿಗೆ ಸೋಲಾರ್ ಫೀಡರ್ ಮೂಲಕ ರೈತರಿಗೆ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಎರಡೂವರೆ ಲಕ್ಷ ರೈತರಿಗೆ ಈ ಯೋಜನೆಯಿಂದ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಪರಿಶಿಷ್ಟ ಪಂಗಡದವರಿಗೆ 75 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದರು.