ಲಾಕಪ್‌ನಲ್ಲಿ ಮಹಿಳೆಯನ್ನು ಅಮಾನುಷವಾಗಿ ಥಳಿಸಿದ ಪೊಲೀಸ್ ಅಧಿಕಾರಿ, ವಿಡಿಯೋ ವೈರಲ್

ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯನ್ನು ಲಾಕ್ಅಪ್ನಲ್ಲಿ ಅಮಾನುಷವಾಗಿ ಥಳಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕಾನ್ಪುರ: ಕಾನ್ಪುರದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯನ್ನು ಲಾಕಪ್ ನಲ್ಲಿ ಅಮಾನುಷವಾಗಿ ಥಳಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಸಮಾಜವಾದಿ ಪಕ್ಷದ ಟ್ವಿಟರ್ ಖಾತೆಯಲ್ಲಿ ಶೇರ್ ಆಗಿರುವ ಈ ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಾನ್ಪುರದ ಕಕ್ವಾನ್ ಪ್ರದೇಶದಲ್ಲಿ ಸಬ್-ಇನ್ಸ್ಪೆಕ್ಟರ್ ಎಂದು ನಂಬಲಾದ ಪೊಲೀಸ್ ಅಧಿಕಾರಿಯು ಮಹಿಳೆಯನ್ನು ಅಮಾನುಷವಾಗಿ ಥಳಿಸಿ, ದೌರ್ಜನ್ಯ ನಡೆಸುತ್ತಿದ್ದು, ಮಹಿಳೆ ಸಹಾಯಕ್ಕಾಗಿ ಬೇಡಿಕೊಳ್ಳುತ್ತಿರುವುದನ್ನು ಮತ್ತು ನೋವಿನಿಂದ ಕೂಗುತ್ತಿರುವುದನ್ನು ಎರಡು ನಿಮಿಷಗಳಷ್ಟು ದೀರ್ಘವಾದ ದೃಶ್ಯಾವಳಿಯಲ್ಲಿ ಸೆರೆಯಾಗಿದೆ.

ವಿಡಿಯೋ ರೆಕಾರ್ಡ್ ಮಾಡುತ್ತಿರುವುದನ್ನು ಕಂಡ ಅಧಿಕಾರಿ, ತನ್ನನ್ನು ತಾನು ರಕ್ಷಿಸಿಕೊಳ್ಳಲು ಮುಂದಾಗುತ್ತಾರೆ. ‘ನೀವು ಪೊಲೀಸರೊಂದಿಗೆ ಸರಿಯಾಗಿ ನಡೆದುಕೊಳ್ಳುತ್ತಿಲ್ಲ, ನಾವು ಏನೇ ಮಾಡಿದರೂ ಅದು ತಪ್ಪು’ ಎಂದಿದ್ದಾರೆ.

ಇದರ ಹೊರತಾಗಿಯೂ, ಆತ ವಿಡಿಯೋದ ಕೊನೆಯವರೆಗೂ ಮಹಿಳೆಯ ಮೇಲೆ ಹಲ್ಲೆ ನಡೆಸುವುದನ್ನು ಮುಂದುವರಿಸಿದ್ದಾರೆ. ಸಮಾಜವಾದಿ ಪಕ್ಷವು ಘಟನೆಯನ್ನು ಖಂಡಿಸಿದೆ. ಘಟನೆಯ ಕುರಿತು ತನಿಖೆ ನಡೆಸಿ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಟ್ವೀಟ್ನಲ್ಲಿ ಆಗ್ರಹಿಸಿದ್ದಾರೆ.

error: Content is protected !!