ವಕೀಲನ ಮೇಲೆ ಹಲ್ಲೆ ಮಾಡಿದ್ದ ಪಿಎಸ್‌ಐ ಸಸ್ಪೆಂಡ್

ವಕೀಲನ ಮೇಲೆ ಹಲ್ಲೆ ಮಾಡಿದ್ದ ಹಾನಗಲ್ ಪಿಎಸ್‌ಐ ಅಮಾನತುಗೊಳಿಸಿ ಹಾವೇರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹನುಮಂತರಾಯ ಆದೇಶ ಹೊರಡಿಸಿದ್ದಾರೆ.

ಶಿವು ತಳವಾರ ಅವರ ಮೇಲೆ ಪಿಎಸ್‌ಐ ಹಲ್ಲೆ ನಡೆಸಿದ್ದರು. ಹಾನಗಲ್ ಠಾಣೆಯ ಪಿಎಸ್‌ಐ ಶ್ರೀಶೈಲ ಪಟ್ಟಣಶೆಟ್ಟಿ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದ್ದು, ನಿನ್ನೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

ಕೇಸ್ ಕೊಡಲು ಠಾಣೆಗೆ ಬಂದಿದ್ದಾಗ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಲಾಗಿತ್ತು. ಪಿಎಸ್‌ಐ ಶ್ರೀಶೈಲ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಧ್ಯರಾತ್ರಿಯವರೆಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಪರಿಶೀಲನೆ ನಡೆಸಿ ಹಾನಗಲ್ ಪಿಎಸ್‌ಐ ಶ್ರೀಶೈಲ ಪಟ್ಟಣಶೆಟ್ಟಿ ಅವರನ್ನು ಅಮಾನತುಗೊಳಿಸಿ ಎಸ್.ಪಿ. ಹನುಮಂತರಾಯ ಆದೇಶ ಹೊರಡಿಸಿದ್ದಾರೆ.

error: Content is protected !!